ಬಂಟ್ವಾಳ: ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿ ಒಂಟಿ ಮಹಿಳೆಯ ಮನೆಗೆ ದಾಳಿ ನಡೆಸಿ, ಹಲ್ಲೆ ನಡೆಸಿದ ಆರೋಪದಲ್ಲಿ ಉತ್ತರ ಭಾರತದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ವಿಟ್ಲ ಎಸ್ಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸ್ ತಂಡ ಯಶಸ್ವಿಯಾಗಿದೆ.
ಉತ್ತರ ಪ್ರದೇಶದ ಜುಬೈರ್ ಎಂಬಾತನನ್ನು ಅನುಮಾನದ ಮೇಲೆ ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈತ ಸ್ಥಳೀಯವಾಗಿ ಕೆಲಸ ನಿರ್ವಹಿಸುತ್ತಿದ್ದು, ಅನುಮಾನದ ಮೇಲೆ ವಶಕ್ಕೆ ಪಡೆದ ಪೊಲೀಸರು, ಆತನಿಂದ ಕೃತ್ಯದ ಸಮಯದಲ್ಲಿ ಬಳಸಿದ ವಸ್ತು ವಶಪಡಿಸಿದ್ದಾರೆ. ಕಾರ್ಮಿಕನಾಗಿ ವಿಟ್ಲಕ್ಕೆ ಬಂದ ಈತ ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹಣದ ಕೊರತೆಯಾಗಿ ಮೂರು ದಿನಗಳಿಂದ ಕೃತ್ಯಕ್ಕೆ ಸ್ಕೆಚ್ ಹಾಕಿದ್ದ ಎಂದು ಅನುಮಾನಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್, ಬಂಟ್ವಾಳ ಸಹಾಯಕ ಅಧೀಕ್ಷಕ ವ್ಯಾಲೆಂಟಿನ್ ಡಿಸೋಜ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ನೇತೃತ್ವದಲ್ಲಿ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ ಹಾಗೂ ಸಿಬ್ಬಂದಿ ಪ್ರಸನ್ನ, ದಿನೇಶ್, ಜಯಕುಮಾರ್, ಪ್ರತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
Kshetra Samachara
11/10/2020 09:06 pm