ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮ ಗೋ ಮಾಂಸ ಸಾಗಾಟ- ಓರ್ವ ವಶಕ್ಕೆ

ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಹಂಪನಕಟ್ಟೆಯಲ್ಲಿ ನಡೆದಿದೆ.

ಹಾಲಿನ ವಾಹನದಲ್ಲಿ ಗೋ ಮಾಂಸ ಸಾಗಾಟ ಆಗುತ್ತಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪಂಪ್ ವೆಲ್‌ನಿಂದ ವಾಹನವನ್ನು ಬೆನ್ನಟ್ಟಿದ್ದ ಭಜರಂಗದಳದ ಕಾರ್ಯಕರ್ತರು ಹಂಪನಕಟ್ಟೆ ಬಳಿ ತಡೆದು ನಿಲ್ಲಿಸಿದಾಗ ಗೋ ಮಾಂಸ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಬಂದರು ಠಾಣಾ ಪೊಲೀಸರು ವಾಹನ ಸಹಿತ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.

Edited By : Vijay Kumar
Kshetra Samachara

Kshetra Samachara

13/10/2020 10:24 am

Cinque Terre

9.47 K

Cinque Terre

1

ಸಂಬಂಧಿತ ಸುದ್ದಿ