ಶಿವಮೊಗ್ಗ: ಅಡುಗೆ ಅನಿಲ ಸೋರಿಕೆಯಿಂದಾಗಿ ಮನೆಯಲ್ಲಿದ್ದ ವಸ್ತು ಬೆಂಕಿಗೆ ಆಹುತಿಯಾದ ಘಟನೆ ಗುರುವಾರ ಬೆಳಗ್ಗೆ ಭದ್ರಾವತಿ ನಗರದ ಹೊಸಮನೆ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸಮನೆ ಭೋವಿ ಕಾಲೊನಿಯ 6ನೇ ತಿರುವಿನ ನಿವಾಸಿ ಭಾಗ್ಯ ಎಂಬವರ ಮನೆಯಲ್ಲಿ ಘಟನೆ ನಡೆದಿದ್ದು, ಬೆಂಕಿ ಅವಘಡದಲ್ಲಿ ಸ್ಟೌವ್, ಪಾತ್ರೆ ಸೇರಿದಂತೆ ದಿನಸಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಅಗ್ನಿಶಾಮಕ ಜಿಲ್ಲಾ ಠಾಣಾಧಿಕಾರಿ ಅಶೋಕ್ ಕುಮಾರ್, ಸ್ಥಳೀಯ ಠಾಣಾಧಿಕಾರಿ ವಸಂತ ಕುಮಾರ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
15/10/2020 11:36 pm