ಸುಳ್ಯ: ತಾಲೂಕಿನ ಮರ್ಕಂಜದಿಂದ ಎರಡು ವರ್ಷಗಳ ಹಿಂದೆ ಪುತ್ತೂರಿನ ಕಾವುಗೆ ಮದುವೆ ಮಾಡಿಕೊಟ್ಟಿದ್ದ ಮಹಿಳೆಯೋರ್ವರು ಹೆರಿಗೆ ವೇಳೆ ತೀವ್ರ ರಕ್ತಸ್ರಾವಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮರ್ಕಂಜ ಗ್ರಾಮದ ಬಳ್ಳಕ್ಕಾನ ಸುಬ್ಬಣ್ಣ ನಾಯ್ಕ ಅವರ ಪುತ್ರಿ ಚಂದ್ರಕಲಾ(25 ) ಮೃತಪಟ್ಟವರು. ಅವರನ್ನು ಹೆರಿಗೆಗೆಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೆರಿಗೆ ವೇಳೆ ರಕ್ತದೊತ್ತಡ ಕಡಿಮೆಯಾಗಿ ಮತ್ತು ತೀವ್ರ ರಕ್ತಸ್ರಾವ ಉಂಟಾಗಿತ್ತು ಎನ್ನಲಾಗಿದೆ. ನಂತರದಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ನವಜಾತ ಶಿಶು ಮಾತ್ರ ಬದುಕುಳಿದಿದೆ ಎಂದು ತಿಳಿದುಬಂದಿದೆ.
Kshetra Samachara
16/10/2020 08:02 pm