ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ : ವಸತಿಗೃಹದಲ್ಲಿ ಯುವ ಜೋಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಸುಳ್ಯ: ನಗರದ ವಸತಿಗೃಹವೊಂದರಲ್ಲಿ ಯುವಕ ಹಾಗೂ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದು ಬಂದಿದೆ. ಯುವತಿ ಬೆಳ್ತಂಗಡಿ ನಿವಾಸಿ ಎಂದು ಹೇಳಲಾಗುತ್ತಿದೆ.

ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : Vijay Kumar
Kshetra Samachara

Kshetra Samachara

19/10/2020 05:57 pm

Cinque Terre

10.78 K

Cinque Terre

1

ಸಂಬಂಧಿತ ಸುದ್ದಿ