ಕಡಬ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮರ್ಧಾಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸುಲೈಮಾನ್ ಎಂಬವರ ಪುತ್ರ ಅಂದುಕುಂಞಿ(38) ಎಂದು ಗುರುತಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಇವರು ಬುಧವಾರ ತಡರಾತ್ರಿ ತನ್ನ ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Kshetra Samachara
22/10/2020 12:48 pm