ಮಂಗಳೂರು: ಇಲ್ಲಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 27,36,659 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧ 531.390 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಆರೋಪಿ ಮುಹಮ್ಮದ್ ಅಶ್ರಫ್ ನನ್ನು ಬಂಧಿಸಿದ್ದಾರೆ. ಈತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಪ್ರಯಾಣಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಚಿನ್ನವನ್ನು ಗುಪ್ತವಾಗಿ ದೇಹದೊಳಗೆ ಅಳವಡಿಸಿ ಸಾಗಾಟ ಮಾಡಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ.
Kshetra Samachara
23/10/2020 11:00 pm