ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ: ಪೆರ್ನೆಯಲ್ಲಿ ಅಡಿಕೆ ವ್ಯಾಪಾರಿಯ ದರೋಡೆ; ಚೂರಿಯಿಂದ ಇರಿದು 4 ಲಕ್ಷ ರೂ. ದೋಚಿದ ತಂಡ

ಮಂಗಳೂರು: ಬೈಕ್ ನಲ್ಲಿ ಬಂದ ನಾಲ್ವರು ಅಪರಿಚಿತರು ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು 4 ಲಕ್ಷ ರೂ. ದೋಚಿ ಪರಾರಿಯಾದ ಘಟನೆ ಉಪ್ಪಿನಂಗಡಿಯ ಪೆರ್ನೆಯಲ್ಲಿ‌ ನಡೆದಿದೆ‌.

ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ಎಂಬವರು ಎಂದಿನಂತೆ ಪೆರ್ನೆಯಲ್ಲಿರುವ ತಮ್ಮ ಅಡಿಕೆ ಅಂಗಡಿ ಮುಚ್ಚಿ ಮನೆಯತ್ತ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಕೃತ್ಯ ನಡೆದಿದೆ. ದೀಪಕ್ ಅವರ ಮನೆಯಿಂದ ಕೆಲವೇ ದೂರದಲ್ಲಿರುವ ಮಠಂದಬೆಟ್ಟು ಎಂಬಲ್ಲಿ ಬೈಕ್ ನಲ್ಲಿ ಬಂದ ನಾಲ್ವರು ಅಪರಿಚಿತರು ಚೂರಿಯಿಂದ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ತೀವ್ರವಾಗಿ ದಾಳಿ ನಡೆಸಿದ್ದು, ಘಟನೆಯಲ್ಲಿ ದೀಪಕ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ವೇಳೆ ದೀಪಕ್ ಶೆಟ್ಟಿ ಅವರ ಬಳಿಯಿದ್ದ 4 ಲಕ್ಷ ರೂ. ದೋಚಿದ ದರೋಡೆಕೋರರು ಪರಾರಿಯಾಗಿದ್ದಾರೆ. ಗಾಯಗೊಂಡ ದೀಪಕ್ ಶೆಟ್ಟಿ ಅವರನ್ನು ಉಪ್ಪಿನಂಗಡಿಯ ಆಸ್ಪತ್ರೆಗೆ ದಾಖಲಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ‌ ಮಂಗಳೂರಿಗೆ ಕರೆದೊಯ್ಯಲಾಗಿದೆ.

Edited By : Vijay Kumar
Kshetra Samachara

Kshetra Samachara

27/10/2020 09:28 pm

Cinque Terre

8.91 K

Cinque Terre

1

ಸಂಬಂಧಿತ ಸುದ್ದಿ