ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ: ಭಂಡಾರಿ ಸಮಾಜ

ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಹತ್ಯೆಯಾದ ಚಿತ್ರನಟ ಸುರೇಂದ್ರ ಬಂಟ್ವಾಳ್ ಅವರ ಹತ್ಯೆಯ ಎಲ್ಲಾ ಆರೋಪಿಗಳನ್ನು ತತ್ ಕ್ಷಣ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಬಂಟ್ವಾಳ ಭಂಡಾರಿ ಸಮಾಜ ಸಂಘ ಬಂಟ್ವಾಳ ಡಿವೈಎಸ್ಪಿ ಅವರಿಗೆ ಮನವಿ ನೀಡಿ ಆಗ್ರಹಿಸಿದೆ.

ಬಂಟ್ವಾಳ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಕಕ್ಕೆಪದವು ಪುಣ್ಕೆದಡಿ ಅವರ ನೇತೃತ್ವದಲ್ಲಿ ಸಂಘದ ಸದಸ್ಯರು ಮಂಗಳವಾರ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ, ಸಮಾಜದ ದಾನಿಯಾಗಿ ಗುರುತಿಸಿಕೊಂಡಿದ್ದ ಸುರೇಂದ್ರ ಬಂಟ್ವಾಳ್ ಅವರು ಚಲನಚಿತ್ರ ನಟರಾಗಿ, ಗಣ್ಯ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ನಾವು ಅವರ ಹತ್ಯೆಯನ್ನು ಖಂಡಿಸುತ್ತಿದ್ದು, ಜತೆಗೆ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

27/10/2020 10:41 pm

Cinque Terre

9.61 K

Cinque Terre

1

ಸಂಬಂಧಿತ ಸುದ್ದಿ