ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ: ಓರ್ವ ಸೆರೆ, 634 ಗ್ರಾಂ ಚಿನ್ನ ವಶ

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಓರ್ವನನ್ನು ಬಂಧಿಸಿದ್ದಾರೆ.

ಬಂಧಿತ ಮಂಗಳೂರು ಮೂಲದ ಅಬೂಬಕ್ಕರ್ ಸಿದ್ದೀಕ್ ಎಂದು ಪೊಲೀಸರು ಮಾಹಿತಿ ನೀಡಿದ್ದು, ಬಂಧಿತನಿಂದ 24 ಕ್ಯಾರೆಟ್‌ನ  634 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ 32,96,800 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಯು ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಆಗಮಿಸಿದ್ದು, ಈತ ಚಿನ್ನವನ್ನು ಪೌಡರ್ ರೂಪವಾಗಿ ಪರಿವರ್ತಿಸಿ ದೇಹದ ಭಾಗಗಳಿಗೆ ಅಂಟಿಸಿಕೊಂಡು ಅಕ್ರಮ ಸಾಗಾಟಕ್ಕೆ ಯತ್ನಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

28/10/2020 11:04 am

Cinque Terre

18.23 K

Cinque Terre

0

ಸಂಬಂಧಿತ ಸುದ್ದಿ