ಬಂಟ್ವಾಳ: ಬಂಟ್ವಾಳದಲ್ಲಿ ವಾರದ ಹಿಂದೆ ಅಪಾರ್ಟ್ ಮೆಂಟ್ ಒಂದರಲ್ಲಿ ಭೀಕರವಾಗಿ ಹತ್ಯೆಗೀಡಾಗಿದ್ದ ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾದ ಇಬ್ಬರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೊಪ್ಪಿಸಲಾಗಿದೆ.
ಬಂಟ್ವಾಳದ ಭಂಡಾರಿ ಬೆಟ್ಟುವಿನ ವಸ್ತಿ ಅಪಾರ್ಟ್ ಮೆಂಟ್ ನಲ್ಲಿ ಅ.20 ರಂದು ನಟ ಸುರೇಂದ್ರ ಭಂಡಾರಿ (ಸುರೇಂದ್ರ ಬಂಟ್ವಾಳ್) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೊಪ್ಪಿಸಲಾಗಿದೆ. ಬಂಟ್ವಾಳದ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್ ಕುಲಾಲ್ (39 ) ಹಾಗೂ ಮಂಗಳೂರು ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್ ( 28) ಎಂಬವರು ಸದ್ಯ ಬಂಧಿತ ಆರೋಪಿಗಳು. ಇವರಲ್ಲದೆ ಇನ್ನೂ ಹಲವರ ವಿಚಾರಣೆ ನಡೆಯುತ್ತಿದ್ದು, ಇನ್ನಷ್ಟು ಬಂಧನವಾಗುವ ಸಾಧ್ಯತೆ ಇದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ ತಲವಾರನ್ನು ವಶಪಡಿಸಿದ್ದು, ಹೆಚ್ಚಿನ ತನಿಖೆಯ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಗೆ ಕೇಳಲಾಗಿತ್ತು.
Kshetra Samachara
28/10/2020 04:59 pm