ಮಂಗಳೂರು: ವಿವಾಹಿತನೋರ್ವ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಬೇಸತ್ತ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ.
ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಧುಶ್ರೀ(26), ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು.
ಮೃತ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ರಿಸ್ಪೆಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ಮಧ್ಯಾಹ್ನ ಸಂಪ್ಯದ ಕೊಲ್ಯದಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ಮಧುಶ್ರೀ ಊಟವಾದ ಬಳಿಕ ತೋಟಕ್ಕೆ ಹೋಗಿ ಕೆರೆಗೆ ಹಾರಿದ್ದಾರೆ.
ಯುವತಿ ಮಧುಶ್ರೀ ಆತ್ಮಹತ್ಯೆಗೆ ದೇವಿಚರಣ್ ಎಂಬಾತ ಕಾರಣ ಎಂದು ಯುವತಿಯ ಮಾವ ವಿಠಲ್ ಗೌಡ ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಸಂಪ್ಯ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
29/10/2020 09:07 am