ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಅ. 20ರಂದು ನಡೆದ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳದ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್ ಕುಲಾಲ್, ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್, ವೆಂಕಪ್ಪ ಯಾನೆ ವೆಂಕಟೇಶ್, ಪ್ರದೀಪ್ ಯಾನೆ ಪಪ್ಪು ಹಾಗೂ ಶರೀಫ್ ಎಂಬವರನ್ನು ಬಂಧಿಸಲಾಗಿದ್ದು, ಇವರಿಗೆ ಐದು ದಿನಗಳ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.
ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಹಾಗೂ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್ ಸರ್ಕಲ್ ಇನ್ ಸ್ಪೆಕ್ಟರ್ ಟಿ.ಡಿ.ನಾಗರಾಜ್ ಪ್ರಕರಣದ ತನಿಖೆ ನಡೆಸುತ್ತಿದ್ದು, ಎಸ್ಸೈಗಳಾದ ಪ್ರಸನ್ನ, ಕಲೈಮಾರ್, ಅವಿನಾಶ್, ನಂದಕುಮಾರ್, ವಿನೋದ್, ರಾಜೇಶ್, ಪಿಐ ರವಿ ಮತ್ತು ಡಿಸಿಐಬಿ ಸಿಬ್ಬಂದಿ ಒಳಗೊಂಡ ಒಟ್ಟು 5 ವಿಶೇಷ ಪತ್ತೆ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹತ್ಯೆಯ ಹಿಂದಿರುವ ಇತರ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
Kshetra Samachara
29/10/2020 10:45 pm