ಬಂಟ್ವಾಳ: ಫರಂಗಿಪೇಟೆಯಲ್ಲಿರುವ ತೃಷಾ ಸ್ಟುಡಿಯೋಗೆ ನುಗ್ಗಿ ಮಾಲಕ, ಬಿಜೆಪಿ ಮುಖಂಡ ದಿನೇಶ್ ಶೆಟ್ಡಿ ಅವರ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿ ಎಲ್ಲ ನಾಲ್ವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆ ಸಮೀಪದ ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19),ಅಬ್ದುಲ್ ರೆಹಮಾನ್(22) ಮತ್ತು ಮಹಮ್ಮದ್ ಸೈಫುದ್ದೀನ್(22),ಸವಾದ್ (20) ಬಂಧಿತ ಆರೋಪಿಗಳಾಗಿದ್ದಾರೆ. ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮೀಪ್ರಸಾದ್ , ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಯವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ. ಪ್ರಸನ್ನ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೆಲವೇ ತಾಸುಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Kshetra Samachara
29/10/2020 11:06 pm