ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಹೊಸ ಕಂಪೆನಿಗೆ ಹೂಡಿಕೆ ಆಮಿಷ;20 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚನೆ

ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ಹೇಳಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿ ಪ್ರಾರಂ ಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಮನವೊಲಿಸಿ ಲಕ್ಷಾಂತರ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಕುರಿತಂತೆ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿಯೊಬ್ಬ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕಿಸಿದ್ದಾನೆ. ಬಳಿಕ ನೀತಾ ಶರ್ಮ ಎಂಬಾಕೆ ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ಹೇಳಿ ಕೊಂಡು ವಿವಿಧ ನಂಬರ್‌ಗಳಿಂದ ಕರೆ ಮಾಡಿ ಸಂಪರ್ಕಿಸಿದ್ದಾರೆ. ಕಂಪೆನಿ ಪ್ರಾರಂಭಿಸುವ ಬಗ್ಗೆ ತಿಳಿಸಿ ಲಿಂಕ್ ಕಳುಹಿಸಿ, 20 ಲಕ್ಷ ರೂ. ವರ್ಗಾ ಯಿಸುವಂತೆ ತಿಳಿಸಿದ್ದಳು. ಅದರಂತೆ ಅ. 14ರಂದು ದೂರುದಾರರು 20 ಲಕ್ಷರೂ. ವರ್ಗಾಯಿಸಿದ್ದಾರೆ. ಬಳಿಕ ಷೇರುಗಳನ್ನು ಖರೀದಿಸುವಂತೆ ತಿಳಿಸಿದ್ದು, 1 240 ರೂ.ನಂತೆ 1 ಸಾವಿರ ಷೇರುಗಳನ್ನು ಖರೀದಿಸಿದ್ದಾರೆ.

15ರಂದು ಇನ್ನೊಂದು ಸಂಸ್ಥೆಯ ಷೇರುಗಳನ್ನು ಖರೀದಿಸು ವಂತೆ ತಿಳಿಸಿದ್ದು, ಅದರಂತೆ 250.95 ರೂ.ನಂತೆ 7,900 ಷೇರುಗಳನ್ನು ಖರೀದಿಸಿದ್ದಾರೆ. ಬಳಿಕ ಹೂಡಿಕೆ ಮಾಡಿದ ಹಣವನ್ನು ವಿತ್‌ ಡ್ರಾ ಮಾಡುವಂತೆ ತಿಳಿಸಿದ್ದು, 1,500 ರೂ. ಹಿಂಪಡೆದಿದ್ದಾರೆ. ಆದರೆ ಆ ಹಣವು ಬೇರೊಂದು ಖಾತೆಯಿಂದ ಬಂದಿದ್ದು, ಇದರಿಂದ ಸಂಶಯ ಬಂದು ನೀತಾ ಶರ್ಮರಿಗೆ ಕೇಳಿದಾಗ ಸರಿಯಾದ ಉತ್ತರ ನೀಡಿಲ್ಲ..

ಈ ನಡುವೆ ಹೂಡಿಕೆ ಮಾಡಿದ ಎಲ್ಲ ಹಣವನ್ನು ವಾಪಸ್‌ ನೀಡುವಂತೆ ಕೇಳಿದಾಗ ನೀತಾ 4 ಲಕ್ಷ ರೂ. ಹೆಚ್ಚುವರಿಯಾಗಿ ಕೇಳಿದ್ದಾರೆ.

ಆಗ ತಾನು ಮೋಸ ಹೋಗಿರುವುದು ಅರಿವಾಗಿದೆ. ಹೂಡಿಕೆ ಮಾಡುವಂತೆ ಹೇಳಿ ಮೋಸ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/10/2024 01:12 pm

Cinque Terre

652

Cinque Terre

0

ಸಂಬಂಧಿತ ಸುದ್ದಿ