ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಸರಗೋಡು: ನಾಪತ್ತೆಯಾಗಿದ್ದ ಮೀನುಗಾರ ಶವವಾಗಿ ಪತ್ತೆ

ಕಾಸರಗೋಡು: ನಿಗೂಢವಾಗಿ ನಾಪತ್ತೆಯಾಗಿದ್ದ ಮೀನುಗಾರರೊಬ್ಬರ ಮೃತದೇಹ ಪೊದೆಯಲ್ಲಿ ಶುಕ್ರವಾರ ಪತ್ತೆಯಾಗಿದ್ದು, ಕೊಲೆ ಗೈದಿರುವ ಬಗ್ಗೆ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತಪಟ್ಟವರನ್ನು ಬೇಕಲ ಬೀಚ್ ರಸ್ತೆಯ ರಾಮಗುರು ನಗರದ ಸುಧಾಕರ (32) ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ಸುಧಾಕರ, ಮನೆಗೆ ಮರಳದೆ ನಾಪತ್ತೆಯಾಗಿದ್ದರು. ಬಳಿಕ ಮನೆಯವರು ಹುಡುಕಾಟ ನಡೆಸಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಆದರೆ, ಸುಧಾಕರ ಅವರ ಶವ ಪೂಚಕ್ಕಾಡ್ ಸಮೀಪ ನಿರ್ಮಾಣ ಹಂತದಲ್ಲಿರುವ ಕಟ್ಟಡ ಹಿಂಭಾಗದ ಪೊದೆಯಲ್ಲಿ ಪತ್ತೆಯಾಗಿದೆ. ದೇಹದ ಮೈಮೇಲೆ ಗಾಯವಿದ್ದು, ಮನೆಯವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಬೇಕಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

09/10/2020 09:57 pm

Cinque Terre

12.52 K

Cinque Terre

0

ಸಂಬಂಧಿತ ಸುದ್ದಿ