ಮಂಗಳೂರು: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಬಾಲಕನ ಮೇಲೆ ಟ್ಯಾಂಕರ್ ಡಿಕ್ಕಿಯಾದ ಘಟನೆ ನಗರ ಹೊರವಲಯದ ಉಳ್ಳಾಲಬೈಲ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಘಟನೆಯಿಂದ 4ರ ಹರೆಯದ ಕೃಷ್ಣ ಎಂಬ ಬಾಲಕನ ಎರಡೂ ಕಾಲುಗಳಿಗೆ ಗಂಭೀರ ಗಾಯವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲಬೈಲ್‌ನಲ್ಲಿ ಸಂಜೆ 6:30ರ ಸುಮಾರಿಗೆ ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲ ಕಡೆಗೆ ತೆರಳುತ್ತಿದ್ದ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ.
ಮೂಲತಃ ಉತ್ತರ ಪ್ರದೇಶದವರಾಗಿರುವ ಬಾಲಕನ ಕುಟುಂಬ ಸದ್ಯ ಉಳ್ಳಾಲಬೈಲ್ ಪ್ರದೇಶದಲ್ಲಿ ವಾಸವಾಗಿದೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
30/11/2020 09:44 pm