ಬಂಟ್ವಾಳ: ಟ್ರಕ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ.75ರ ನರಹರಿ ಪರ್ವತ ಬಳಿಯ ಕೃಷ್ಣಕೋಡಿ ಎಂಬಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಚಾಲಕ ಅಕ್ರಮ್ ಬಾಷಾ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಘನಗಾತ್ರದ ಲಾರಿಯಲ್ಲಿ ಅಧಿಕ ಭಾರದ ವಯರ್ ಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಗಾಯಗೊಂಡ ಅಕ್ರಮ್ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯ ಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
01/12/2020 11:08 pm