ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪಡೀಲ್‌ನಲ್ಲಿ ಭೀಕರ ಅಪಘಾತ- ಬೈಕ್ ಸವಾರ ಮೃತ್ಯು; ಸಹಸವಾರ ಗಂಭೀರ

ಮಂಗಳೂರು: ನಗರದ ಪಡೀಲ್ ಸಮೀಪ ಓಮ್ನಿ ಇಕೋ ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ಚಿಕ್ಕಮಗಳೂರು ಮೂಲದ ಸುಮಂತ್ (21) ಮೃತ ಬೈಕ್ ಸವಾರ. ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಹಾಗೂ ಹಾಸನದ ಮೂಲದ ಕೆಲವು ಸ್ನೇಹಿತರು ಮೂರು ಬೈಕ್‌ಗಳಲ್ಲಿ ಕರಾವಳಿ ಪ್ರವಾಸ ಕೈಗೊಂಡಿದ್ದರು. ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಕಡಲ ತೀರಗಳಿಗೆ ಭೇಟಿ ನೀಡಿದ್ದರು.

ಇಂದು ಊರಿಗೆ ವಾಪಸಾಗುವ ಸಂದರ್ಭ ಪಡೀಲ್ ಸಮೀಪದಲ್ಲಿ ಓಮ್ನಿ ಇಕೋ ಕಾರಿಗೆ ಸುಮಂತ್ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸುಮಂತ್ ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಗೆ ಎಸೆಯಲ್ಪಟ್ಟಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದರು. ಅಪಘಾತದಲ್ಲಿ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
Kshetra Samachara

Kshetra Samachara

08/12/2020 08:43 pm

Cinque Terre

12.85 K

Cinque Terre

0

ಸಂಬಂಧಿತ ಸುದ್ದಿ