ಮಂಗಳೂರು: ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಚೆಂಬುಗುಡ್ಡೆ ಬಳಿ ನಡೆದಿದೆ.
ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಸಾವನ್ನಪ್ಪಿದವರು. ಸಂದೇಶ್ ಅವರು ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸಾಗುತ್ತಿದ್ದರು. ಅಪಘಾತದಿಂದಾಗಿ ರಸ್ತೆಗುರುಳಿ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೈಂಟರ್ ಆಗಿ ದುಡಿಯುತ್ತಿದ್ದ ಸಂದೇಶ್, ಕೋವಿಡ್ ಲಾಕ್ ಡೌನ್ ನಂತರ ಕೊಲ್ಯ ಸಮೀಪ ಮೀನು ಮಾರಾಟ ನಡೆಸುತ್ತಿದ್ದರು. ಈ ಕುರಿತು ಮಂಗಳೂರಿನ ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
26/12/2020 11:24 am