ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿ ಜತೆ ಡ್ರಗ್ಸ್ ತೆಗೆದುಕೊಂಡಿದ್ದ ಮಣಿಪುರದ ಯುವತಿ ಸೆರೆ

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಯುವತಿಯೊಬ್ಬಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಣಿಪುರದ ಆಸ್ಕಾ ಎಂಬಾಕೆ ಬಂಧನಕ್ಕೆ ಒಳಗಾದವಳು.

ಈಕೆ ನಟ, ಡ್ಯಾನ್ಸರ್ ಕಿಶೋರ್ ಶೆಟ್ಟಿ ಜತೆ ಡ್ರಗ್ಸ್ ತೆಗೆದು ಕೊಂಡಿದ್ದಳು ಎನ್ನಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಯುವತಿಯರನ್ನು ವಶಕ್ಕೆ ಪಡೆದಿದ್ದ ಸಿಸಿಬಿ, ಇಬ್ಬರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು.‌

ಈ ವೇಳೆ ಆಸ್ಕಾಳ ರಕ್ತದಲ್ಲಿ ಡ್ರಗ್ಸ್ ಸೇವಿಸಿರುವ ಬಗ್ಗೆ ಪಾಸಿಟಿವ್ ವರದಿ ಬಂದಿತ್ತು.

ಮತ್ತೊಬ್ಬಳಲ್ಲಿ ನೆಗೆಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಈಕೆಯನ್ನು ವಶಕ್ಕೆ ಪಡೆದುಕೊಂಡು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

22/09/2020 10:39 am

Cinque Terre

10.64 K

Cinque Terre

0

ಸಂಬಂಧಿತ ಸುದ್ದಿ