ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮದ್ಯ ಅಕ್ರಮ ಸಾಗಾಟ ಪತ್ತೆ: ಇಬ್ಬರು ಆರೋಪಿಗಳ ಬಂಧನ

ಬಂಟ್ವಾಳ: ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳಿಬ್ಬರನ್ನು ವಿಟ್ಲ ಪೊಲೀಸ್ ಠಾಣಾ ಎಸ್.ಐ.ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರ ತಂಡ ವಿಟ್ಲಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಇಂದು ವಶಕ್ಕೆ ಪಡೆದಿದೆ.

ಸುವರ್ಣ ನಾಯ್ಕ್ ಹಾಗೂ ಮಹಮ್ಮದ್ ಶರೀಫ್ ಬಂಧಿತರು. ಆರೋಪಿಗಳಿಬ್ಬರು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯದ ಟೆಟ್ರಾ ಪ್ಯಾಕೇಟ್ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತಮ್ಮ ವಶದಲ್ಲಿಟ್ಟು, ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣಾ ಎಸ್ ಐ ವಿನೋದ್ ರೆಡ್ಡಿಯವರ ನೇತೃತ್ವದ ಪೊಲೀಸರು, ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಅವರಿಬ್ಬರನ್ನು ತಡೆದು ನಿಲ್ಲಿಸಿ ಅವರ ಬಳಿ ಇದ್ದ 90 ಎಮ್ ಎಲ್ ಮದ್ಯ ತುಂಬಿದ 96 ಟೆಟ್ರಾ ಪ್ಯಾಕೇಟ್ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ವಶಪಡಿಸಿಕೊಂಡಿರುವ ಮದ್ಯದ ಒಟ್ಟು ಮೌಲ್ಯ 3360 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

22/09/2020 08:57 pm

Cinque Terre

16.02 K

Cinque Terre

0

ಸಂಬಂಧಿತ ಸುದ್ದಿ