ಮಂಗಳೂರು: ಡ್ರಗ್ ಜಾಲದ ಬೆನ್ನು ಹತ್ತಿರುವ ಮಂಗಳೂರು ಪೊಲೀಸರು ಇಂದು ಮತ್ತೊಬ್ಬ ಪೆಡ್ಲರ್‍ನನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.
ಶಾನ್ ಬಂಧಿತ ಪ್ರಮುಖ ಪೆಡ್ಲರ್. ಆರೋಪಿಯು ಮೂಲತಃ ಮಂಗಳೂರಿನ ಬಂದರು ನಿವಾಸಿಯಾಗಿದ್ದು, ತರುಣ್ ರಾಜ್‌ನ ಪಾರ್ಟಿಗಳಿಗೆ ಡ್ರಗ್ಸ್ ನೀಡುತ್ತಿದ್ದ. ಇತ್ತೀಚಿಗೆ ಬಂಧನವಾಗಿದ್ದ ಶಾಕೀರ್ ಮೂಲಕ ಡ್ರಗ್ಸ್ ಪಾರ್ಟಿಗಳಿಗೆ ಶಾನ್‌ನಿಂದ ಡ್ರಗ್ಸ್ ಸಪ್ಲೈ ಮಾಡಲಾಗುತ್ತಿತ್ತು ಎಂಬ ಮಾಹಿತಿ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಮುಂಬೈ, ಗೋವಾದಿಂದ ಡ್ರಗ್ಸ್ ತರಿಸಿಕೊಡುತ್ತಿದ್ದ ಶಾನ್, ರಾಜ್ಯದ ವಿವಿಧೆಡೆ ನಡೆಯುವ ಪಾರ್ಟಿಗಳಿಗೆ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿರುವ ಮಂಗಳೂರು ಸಿಸಿಬಿ ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆ.
Kshetra Samachara
28/09/2020 10:24 pm