ಬಂಟ್ವಾಳ: ಫಾರೂಕ್ ಯಾನೆ ಚೆನ್ನ ಫಾರೂಕ್ ಹತ್ಯೆಗೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ತೊಕ್ಕೊಟ್ಟು ಬಳಿ ಬಂಧಿಸಿದ್ದಾರೆ.
ಬಂಧಿತರನ್ನು ನಂದಾವರ ನಿವಾಸಿ ಸದ್ಯ ತೊಕ್ಕೊಟ್ಟುವಿನಲ್ಲಿ ವಾಸವಾಗಿರುವ ಹಫೀಜ್ ಆಲಿಯಾಸ್ ಅಪ್ಪಿಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಎಂದು ಪೊಲೀಸರು ತಿಳಿಸಿದ್ದಾರೆ.
ಅ.22ರಂದು ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಆಲಿಯಾಸ್ ಚೆನ್ನ ಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಬಂದು ಕೊಚ್ಚಿ ಕೊಲೆ ನಡೆಸಿ ಪರಾರಿಯಾಗಿದ್ದರು. ಖಲೀಲ್, ಹಫೀಜ್ ಆಲಿಯಾಸ್ ಅಪ್ಪಿ ಹಾಗೂ ಇರ್ಶಾದ್ ಎಂಬವರು ಕೊಲೆ ನಡೆಸಿರುವುದಾಗಿ ಸ್ಥಳೀಯರು ಪೊಲೀಸ್ ವಿಚಾರಣೆಯ ವೇಳೆ ನೀಡಿದ ಮಾಹಿತಿ ಆಧರಿಸಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Kshetra Samachara
06/11/2020 06:35 pm