ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ: ಅಡಿಕೆ ವ್ಯಾಪಾರಿಯ ದರೋಡೆ, ಚೂರಿ ಇರಿತ ಪ್ರಕರಣ ; ಮೂವರ ಸೆರೆ

ಉಪ್ಪಿನಂಗಡಿ: ಚೂರಿಯಿಂದ ಇರಿದು ಅಡಿಕೆ ವ್ಯಾಪಾರಿಯನ್ನು ದರೋಡೆ ನಡೆಸಿದ ಮೂವರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕೋಟೆಕನಿ ಮಿತ್ತಪದವಿನ ಅಫ್ರೀದ್ (22), ಸೋಮವಾರ ಪೇಟೆ ತಾಲೂಕಿನ ದೊಡ್ಡಹನಕೊಡು ಗ್ರಾಮದ ಕಾಗಡಿಕಟ್ಟೆ ನಿವಾಸಿ ಜುರೈಝ್ (20) ಮತ್ತು ಮೂಲತಃ ಬಂಟ್ವಾಳ ತಾಲೂಕಿನ ಬಡಗಬೆಲ್ಲೂರು ಗ್ರಾಮದ ಶಾಲೆ ಬಳಿ ನಿವಾಸಿ, ಹಾಲಿ  ಕಡೇಶಿವಾಲಯ ದೊಡ್ಡಾಜೆಯಲ್ಲಿ ವಾಸವಿರುವ  ಮಹಮ್ಮದ್ ತಂಝೀಲ್ (22) ಬಂಧಿತರು. ತಲೆಮರೆಸಿಕೊಂಡಿರುವ ಇನ್ನಿಬ್ಬರಿಗಾಗಿ ಶೋಧ ಮುಂದುವರಿದಿದೆ.

ಬಂಧಿತರಿಂದ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ, ಚೂರಿ, ಮೂರು ಮೊಬೈಲ್ ಹಾಗೂ ಸುಲಿಗೆ ಮಾಡಿದ ಹಣ ವಶಕ್ಕೆ ಪಡೆಯಲಾಗಿದೆ.

ಪೊಲೀಸರು ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

Edited By : Nirmala Aralikatti
Kshetra Samachara

Kshetra Samachara

10/11/2020 01:05 pm

Cinque Terre

8.2 K

Cinque Terre

0

ಸಂಬಂಧಿತ ಸುದ್ದಿ