ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ವಿರುದ್ಧ ಆಡಿದ್ದಾರೆನ್ನಲಾದ ಮಾತಿಗೆ ವಿರೋಧವಾಗಿ ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ವಿರುದ್ಧ ಕಾಂಗ್ರೆಸ್ ಮುಖಂಡರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿ, ಹರಿಕೃಷ್ಣ ಬಂಟ್ವಾಳ್ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.
ಜಿಪಂ ಸದಸ್ಯ ಎಂ.ಎಸ್. ಮಹಮ್ಮದ್ ದೂರು ನೀಡಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಜಿಪಂ ಸದಸ್ಯೆ ಮಂಜುಳಾ ಮಾಧವ ಮಾವೆ ಮೊದಲಾದವರು ಇದ್ದರು.
Kshetra Samachara
12/11/2020 05:53 pm