ಮಂಗಳೂರು: ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ.ಸಂತೋಷ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ, ಹಣಕ್ಕೆ ಬೇಡಿಕೆ ಇರಿಸಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಮ್ನಲ್ಲಿ ಪ್ರಕರಣ ದಾಖಲಾಗಿದೆ.
ಸಂತೋಷ್ ಕುಮಾರ್ ತಮ್ಮ ಕುಟುಂಬದೊಂದಿಗೆ ಇರುವ ಅವರ ಫೋಟ ಬಳಸಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಅವರ ಆಪ್ತರ ವಲಯದಲ್ಲಿ ಹಣದ ಬೇಡಿಕೆ ಇರಿಸಿ ಹಣ ಲಪಟಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದುಷ್ಕರ್ಮಿಗಳು ತಮ್ಮ ಹೆಸರು, ಫೋಟೊ, ಹುದ್ದೆಯನ್ನು ಬಳಸಿ ನಕಲಿ ಫೇಸ್ಬುಕ್ ಖಾತೆಯೊಂದನ್ನು ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿರುವುದು ತಮ್ಮ ಗಮನಕ್ಕೆ ಬಂದಿದ್ದು, ಯಾರೂ ತಮ್ಮ ಹೆಸರಿನಲ್ಲಿ ಈಮೇಲ್, ಕರೆ, ಫ್ರೆಂಡ್ ರಿಕ್ವೆಸ್ಟ್ ಬಂದಲ್ಲಿ ಸ್ಪಂದಿಸದಂತೆ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಮನವಿ ಮಾಡಿದ್ದಾರೆ.
Kshetra Samachara
20/11/2020 09:06 am