ಕಾಸರಗೋಡು: ಅಕ್ರಮವಾಗಿ ವಿದೇಶಿ ಮದ್ಯ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕುಂಬಳೆ ನಿವಾಸಿ ನಿತೇಶ್ (27) ಎಂದು ಗುರುತಿಸಲಾಗಿದ್ದು, ಈತನಿಂದ 288 ಬಾಟಲಿ ವಿದೇಶಿ ಮದ್ಯ ಹಾಗೂ ಸಾಗಾಟಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ.
ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ನಿನ್ನೆ ರಾತ್ರಿ ಕುಂಬಳೆ ಕಂಚಿಕಟ್ಟೆ ಸೇತುವೆ ಸಮೀಪ ಕಾರನ್ನು ತಪಾಸಣೆಗೆ ಒಳಪಡಿಸಿದಾಗ ಕಾರಿನಲ್ಲಿ 228 ಬಾಟಲಿ ವಿದೇಶಿ ಮದ್ಯ ಪತ್ತೆಯಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕುಂಬಳೆ ಪೊಲೀಸರು ಆರೋಪಿ ಸಹಿತ ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
Kshetra Samachara
24/11/2020 04:48 pm