ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದ ಬುಡೋಳಿಯಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಕಾಳಭೈರವ ಗಸ್ತಿನ ತಂಡ ಕಾರ್ಯಾಚರಣೆ ನಡೆಸಿ ಲಾರಿಯೊಂದನ್ನು ಪತ್ತೆ ಹಚ್ಚಿದ್ದು, ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿ ಕಂಡುಬಂದಿವೆ.
ಈ ಹಿನ್ನೆಲೆಯಲ್ಲಿ ಲಾರಿ ಮತ್ತು ಸೊತ್ತು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 5 ಲಕ್ಷ ಮೌಲ್ಯದ ಸೊತ್ತು ಇವಾಗಿವೆ. ಕಾರ್ಯಾಚರಣೆಯಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಯಶೋಧರ, ಅರಣ್ಯ ರಕ್ಷಕರಾದ ಲಕ್ಷ್ಮಿನಾರಾಯಣ, ಜಿತೇಶ್ ವಿ., ಸಿಬ್ಬಂದಿ ಪ್ರವೀಣ್ ಕಲ್ಮಲೆ, ಭಾಸ್ಕರ ಡಿ., ಜಯರಾಮ್ ಪಾಲ್ಗೊಂಡಿದ್ದರು. ಡಿಸಿಎಫ್ ಡಾ. ಕರಿಕಾಲನ್ ಮಾರ್ಗದರ್ಶನದಲ್ಲಿ ಎಸಿಎಫ್ ಸುಬ್ರಹ್ಮಣ್ಯ ರಾವ್ ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ.
ಕಾರ್ಯಾಚರಣೆ ವೇಳೆ ಪುತ್ತೂರು ವಲಯ ಅರಣ್ಯಾಧಿಕಾರಿ ಕಚೇರಿ ಸಿಬಂದಿ ಸಹಕರಿಸಿದ್ದರು.
Kshetra Samachara
25/11/2020 09:12 pm