ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರೌಡಿಶೀಟರ್ ಇಂದ್ರಜಿತ್ ಹತ್ಯೆ ಪ್ರಕರಣ: 8 ಮಂದಿ ವಶಕ್ಕೆ

ಮಂಗಳೂರು: ಕುದ್ರೋಳಿ ಕರ್ನಲ್ ಗಾರ್ಡನ್ ಬಳಿ ಬುಧವಾರ ತಡರಾತ್ರಿ ನಡೆದ ಬೊಕ್ಕಪಟ್ಣ ರೌಡಿಶೀಟರ್ ಇಂದ್ರಜಿತ್(28) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿಯನ್ನು ಬರ್ಕೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇಂದ್ರಜಿತ್ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಮನೆಯಿಂದ ಹೊರಹೋಗಿದ್ದು, ಸ್ನೇಹಿತನೊಬ್ಬನ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಅಲ್ಲಿಂದ ಮರಳಿ ಬರುವ ಸಂದರ್ಭ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದಾರೆಂದು ತಿಳಿದು ಬಂದಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲೀಸರು ತನಿಖೆ ಆರಂಭಿಸಿ ಸುಮಾರು 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಈ ಪೈಕಿ ಎಂಟು ಮಂದಿಯನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ. ರೌಡಿಶೀಟರ್ ಇಂದ್ರಜಿತ್‌ನನ್ನು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಸಾಧ್ಯತೆಯಿದ್ದು, ಈ ಬಗ್ಗೆ ಪೊಲೀಸ್ ತನಿಖೆ ಮುಂದುವರಿದಿದೆ.

Edited By : Vijay Kumar
Kshetra Samachara

Kshetra Samachara

27/11/2020 09:59 pm

Cinque Terre

15.53 K

Cinque Terre

0

ಸಂಬಂಧಿತ ಸುದ್ದಿ