ಮಂಗಳೂರು: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ವಿಶೇಷ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕಾಸರಗೋಡು ಮಧೂರು ರಸ್ತೆಯ ಮೀಪುಗುರಿ ನಿವಾಸಿ ಪ್ರವೀಣ್ (40) ಬಂಧಿತ ಆರೋಪಿ.
ಈತ 2005ರಲ್ಲಿ ಇತರ ನಾಲ್ವರು ಸ್ನೇಹಿತರೊಂದಿಗೆ ಸೇರಿಕೊಂಡು ಬಸ್ ನಿರ್ವಾಹಕರೊಬ್ಬರ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ.
ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 15 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Kshetra Samachara
04/12/2020 10:47 pm