ಮಂಗಳೂರು: ನಗರದಲ್ಲಿ ಪ್ರಚೋದನಕಾರಿ ಗೋಡೆ ಬರಹ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು 10 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಆರೋಪಿಗಳಾದ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರೀಕ್ (22) ಮತ್ತು ಮಾಝ್ ಮುನೀರ್ ಅಹಮ್ಮದ್ (21) ಎಂಬವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಪೊಲೀಸರ ವಿನಂತಿ ಮೇರೆಗೆ ನ್ಯಾಯಾಲಯ 10 ದಿನಗಳ ಕಾಲ ಕಸ್ಟಡಿಗೆ ನೀಡಿದೆ.
Kshetra Samachara
09/12/2020 09:46 pm