ಕಾಸರಗೋಡು: ಮೂರು ಕಿಲೋ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಜೇಶ್ವರ ಪಾವೂರಿನ ರಾಜೇಶ್ (30) ಎಂದು ಗುರುತಿಸಲಾಗಿದೆ.
ಮಂಜೇಶ್ವರ ಗೇರುಕಟ್ಟೆಯಲ್ಲಿ ಬೈಕನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಬೈಕ್ ನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ, ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಅಕ್ರಮ ಮದ್ಯ, ಗಾಂಜಾ ಸೇರಿದಂತೆ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಗಡಿ ಪ್ರದೇಶದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
Kshetra Samachara
11/12/2020 10:35 am