ಮಂಗಳೂರು: ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ.
ಗ್ರೆಟಾ ಡಿಸೋಜಾ (40) ಮೃತ ಶಿಕ್ಷಕಿ. ಗ್ರೆಟಾ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ, ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಅಷ್ಟೇ ಅಲ್ಲದೆ ನಿದ್ರೆಯ ಸಮಸ್ಯೆ ಕಾಡುತ್ತಿರುವ ಬಗ್ಗೆ ಕೆಲ ಸಹೋದ್ಯೋಗಳ ಬಳಿ ಹೇಳಿಕೊಂಡಿದ್ದರು ಎಂಬ ಮಾಹಿತಿ ಲಭಿಸಿದೆ.
Kshetra Samachara
16/12/2020 08:27 pm