ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಎಸ್ ಆರ್ ಪಿ ಪೊಲೀಸ್ ಕಾನ್ ಸ್ಟೇಬಲ್ ನಾಪತ್ತೆ: ದೂರು ದಾಖಲು

ಮಂಗಳೂರು: ಕೆಎಸ್ ಆರ್ ಪಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬರು ಕೊಣಾಜೆ ಅಸೈಗೋಳಿಯ ಪೊಲೀಸ್ ವಸತಿ ಗೃಹದಿಂದ ನಾಪತ್ತೆಯಾಗಿದ್ದಾರೆ.

ಕಾಣೆಯಾದವರನ್ನು ಕರ್ನಾಟಕ ಮೀಸಲು ಪೊಲೀಸ್ ಪಡೆಯ ಏಳನೇ ಬೆಟಾಲಿಯನ್ ನ ಕಾನ್ ಸ್ಟೇಬಲ್ ಅನಿಲ್ ಕುಮಾರ್ (29) ಎಂದು ತಿಳಿದು ಬಂದಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆ ಮೂಲದವರಾಗಿರುವ ಅನಿಲ್ ತನ್ನ ತಾಯಿ, ಪತ್ನಿಯೊಂದಿಗೆ ಅಸೈಗೋಳಿಯ ಪೊಲೀಸ್ ವಸತಿಗೃಹದಲ್ಲಿ ವಾಸವಾಗಿದ್ದರು.

ಗುರುವಾರ ಸಂಜೆಯಿಂದ ಅವರು ನಾಪತ್ತೆಯಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಬೇಸತ್ತು ಅವರು ನಾಪತ್ತೆಯಾಗಿರಬಹುದು ಎಂದು ಸಂಶಯಿಸಲಾಗಿದೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

19/12/2020 10:17 am

Cinque Terre

8.99 K

Cinque Terre

0

ಸಂಬಂಧಿತ ಸುದ್ದಿ