ಕಡಬ: ಪಿಯುಸಿ ಓದುತ್ತಿರುವ ತರುಣಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಆರೋಪದ ಮೇರೆಗೆ ಯುವಕನೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಶೋಹೆಬ್ ಕೊತ್ವಾಲ್ ಎಂಬಾತ ಬಂಧಿತ ಯುವಕ. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಎಂಬ ದೂರು ದಾಖಲಾಗಿದ್ದು, ಈತ ಅಸಭ್ಯವಾಗಿ ಸಂದೇಶ ರವಾನಿಸುತ್ತಿದ್ದ ಮತ್ತು ತನ್ನ ಧರ್ಮಕ್ಕೆ ಮತಾಂತರವಾಗುವಂತೆಯೂ ಒತ್ತಾಯಿಸುತ್ತಿದ್ದ ಎಂದು ತರುಣಿ ಆರೋಪಿಸಿದ್ದಾಳೆ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ.
Kshetra Samachara
22/12/2020 06:44 pm