ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬಟ್ಟೆ ಅಂಗಡಿ ಉದ್ಯಮಿ ನಾಪತ್ತೆ; ಪ್ರಕರಣ ದಾಖಲು

ಮಂಗಳೂರು: ಸೆಂಟ್ರಲ್ ಮಾರ್ಕೆಟ್‌ ನಲ್ಲಿರುವ ಬಟ್ಟೆ ಅಂಗಡಿಯೊಂದರ ಪಾಲುದಾರ, ಉದ್ಯಮಿ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ನಮಿಕಟ್ಟೆ ನಿವಾಸಿ ಸಲೀಂ ಅಹ್ಮದ್ (35) ನಾಪತ್ತೆಯಾದವರು.

ಇವರು ಮಾರ್ನಮಿಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಡಿ.21ರ ಬೆಳಿಗ್ಗೆ ಮನೆಯಿಂದ ತೆರಳಿದವರು ವಾಪಸಾಗಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸ್ನೇಹಿತರು, ಬಂಧುಗಳಲ್ಲಿ ವಿಚಾರಿಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸಲೀಂ 5.10 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಸಪೂರ ಶರೀರ, ದುಂಡು ಮುಖ ಹೊಂದಿದ್ದಾರೆ. ಕನ್ನಡ, ಹಿಂದಿ, ಇಂಗ್ಲಿಷ್, ಮಲೆಯಾಳಂ ಮಾತನಾಡುವ ಇವರು ಪದವೀಧರರಾಗಿದ್ದಾರೆ.

ಮಾಹಿತಿ ದೊರೆತವರು ಮಂಗಳೂರು ಪೊಲೀಸ್ ನಿಯಂತ್ರಣ ಕೊಠಡಿ (0824-2220800) ಅಥವಾ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

23/12/2020 05:11 pm

Cinque Terre

6.74 K

Cinque Terre

0

ಸಂಬಂಧಿತ ಸುದ್ದಿ