ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಶಾಸಕ ಖಾದರ್ ನೇತೃತ್ವದಲ್ಲಿ ಠಾಣೆಗೆ ಮುತ್ತಿಗೆ

ಉಳ್ಳಾಲ: ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ಹರೇಕಳದಲ್ಲಿ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರನನ್ನು ಕೂಡಲೇ ಬಂಧಿಸಬೇಕೆಂದು ಶಾಸಕ ಯು.ಟಿ.ಖಾದರ್ ‌ಸಹಿತ ಕಾಂಗ್ರೆಸ್ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು.

ಗ್ರಾಮ ಪಂಚಾಯ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಘರ್ಷಣೆ ನಡೆದಿತ್ತು.

ಈ ವೇಳೆ ಕೈ ಕಾರ್ಯಕರ್ತ ಝಕಾರಿಯ ಮಲಾರ್ ಎಂಬವರಿಗೆ ಎಸ್‌ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿದ್ದರು ಎಂದು ದೂರಲಾಗಿದೆ. ಹಲ್ಲೆಗೊಳಗಾದ ಝಕಾರಿಯ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿತ್ತು.

Edited By : Nagaraj Tulugeri
Kshetra Samachara

Kshetra Samachara

23/12/2020 06:20 pm

Cinque Terre

6.65 K

Cinque Terre

0

ಸಂಬಂಧಿತ ಸುದ್ದಿ