ಬಂಟ್ವಾಳ: ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯ ಆಟೋ ಚಾಲಕ ಶ್ರೀಧರ್ (36) ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.
ವೈಯಕ್ತಿಕ ಕಾರಣದಿಂದ ಅವರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಅವರ ಪತ್ನಿ, ಮಕ್ಕಳು ತವರಿಗೆ ಹೋಗಿದ್ದರು. ಬುಧವಾರ ಬೆಳಗ್ಗೆ ಶ್ರೀಧರ್ ಅವರು ಮನೆಯ ಸಿಟೌಟ್ ನಲ್ಲಿ ಈ ಕೃತ್ಯ ಎಸಗಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
Kshetra Samachara
23/12/2020 10:55 pm