ಮಂಗಳೂರು: ಡ್ರಗ್ಸ್ ಜಾಲಗಳ ಬೆನ್ನು ಹತ್ತಿರುವ ಮಂಗಳೂರು ಪೊಲೀಸರು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಓರ್ವನನ್ನು ಇಂದು ಬಂಧಿಸಿದ್ದಾರೆ.
ಸುರತ್ಕಲ್ ಸಮೀಪದ ಸೂರಿಂಜೆಯ ಮೊಹಮ್ಮದ್ ಶಾಕಿರ್ (35) ಬಂಧಿತ. ಈತನಿಂದ ಸುಮಾರು 27 ಸಾವಿರ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸಹಿತ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೆ.19ರಂದು ನಗರ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾದ ಡ್ಯಾನ್ಸ್ ಕೊರಿಯೋಗ್ರಾಫರ್ ಕಿಶೋರ್ ಅಮನ್ ಶೆಟ್ಟಿ ಹಾಗೂ ಅಕೀಲ್ ನೌಶೀಲ್ ನೀಡಿದ ಮಾಹಿತಿಯಂತೆ ಶಾಕಿರ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
Kshetra Samachara
27/09/2020 10:21 pm