ಮಂಗಳೂರು: ಮಾದಕ ವಸ್ತು ಜಾಲದ ಪ್ರಕರಣ ಚೈನ್ ಲಿಂಕ್ ದೊಡ್ಡದಿದೆ. ಇನ್ಸ್ ಪೆಕ್ಟರ್ ವರ್ಗಾವಣೆ ಹಿಂದೆ ಇರುವುದು ಬೇರೆ ಕಾರಣ ಎಂದು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, 'ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಈಗ ಪ್ರಚಾರವಾಗುತ್ತಿರುವ ವಿಷಯ ಸತ್ಯಕ್ಕೆ ದೂರದ ಮಾತು. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಮಾಧ್ಯಮಗಳಲ್ಲಿ ಬಂದ ವಿಚಾರವನ್ನು ನಾವೇ ತನಿಖೆ ಮಾಡಬೇಕಾಗುತ್ತದೆ. ಯಾವ ಅಧಿಕಾರಿಗಳ ಮೇಲೂ ಒತ್ತಡ ಹೇರಲಾಗಿಲ್ಲ. ಯಾವಗ ಪ್ರಕರಣ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಡ್ರಗ್ಸ್ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಗಳ ಬಂಧನವಾಗಿದೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ. ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಹೇಳಿದರು.
Kshetra Samachara
03/10/2020 02:37 pm