ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೋವು ಕಳವು, ಅಕ್ರಮ ಸಾಗಾಟ ಪತ್ತೆಗೆ ವಿಶೇಷ ದಳ ರಚನೆ: ಕಮಿಷನರ್ ವಿಕಾಸ್

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗೋವು ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ ರಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗೋವು ಕಳವು- ಅಕ್ರಮ ಸಾಗಾಟ ಮತ್ತು ದನಗಳ ಅಕ್ರಮ ವಧೆ ತಡೆಟ್ಟುವ ಸಲುವಾಗಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯನ್ನೊಳಗೊಂಡ ‘ದನ ಕಳವು ಮತ್ತು ಅಕ್ರಮ ಸಾಗಾಟ ಪತ್ತೆ ದಳ’ ಎಂಬ ವಿಶೇಷ ತಂಡ ಅ.5ರಿಂದ ಕಾರ್ಯಾಚರಿಸುತ್ತಿದ್ದು, ಏಳು ಪ್ರಕರಣಗಳನ್ನು ಪತ್ತೆ ಹಚ್ಚಿ 28 ಗೋವುಗಳನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಲ್ಲದೆ, ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ 32 ಸ್ಥಳಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದೆ ಎಂದಿರುವ ಅವರು, ಬೆಳಗ್ಗಿನ ಜಾವ ವಿಶೇಷ ರೌಂಡ್ಸ್‌ಗೆ ಸೂಚನೆ ನೀಡಲಾಗಿದ್ದು, ಪಿಎಸ್‌ಐ ದರ್ಜೆಯ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗುತ್ತಿದೆ.

ಪೊಲೀಸ್ ನಿರೀಕ್ಷಕರ ದರ್ಜೆಯ ಅಧಿಕಾರಿಯನ್ನು ಉಪವಿಭಾಗವಾರು ಪ್ರತಿದಿನ ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

26/10/2020 10:35 pm

Cinque Terre

14.35 K

Cinque Terre

1

ಸಂಬಂಧಿತ ಸುದ್ದಿ