ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ನಡೆದ ತುಳು ಚಿತ್ರನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿ, ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳ್ತಂಗಡಿ ನಿವಾಸಿ ಪ್ರತೀಕ್ ಹಾಗೂ ಜಯೇಶ್ ಯಾನೆ ಸಚ್ಚು ಬಂಧಿತರು. ಹತ್ಯೆಯ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ ಎಂಬ ಆರೋಪದಲ್ಲಿ ಇವರನ್ನು ಬಂಧಿಸಲಾಗಿದೆ.
ಪ್ರಕರಣದಲ್ಲಿ ಈಗಾಗಲೇ 9 ಮಂದಿಯನ್ನು ಬಂಧಿಸಲಾಗಿದ್ದು, ಪ್ರಕರಣದ ಆರೋಪಿಗಳ ಸಂಖ್ಯೆ 11ಕ್ಕೇರಿದೆ.
Kshetra Samachara
03/11/2020 04:09 pm