ಕಾಸರಗೋಡು: ಡಿವೈಎಫ್ಐ ಕಾರ್ಯಕರ್ತ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಯೂತ್ ಲೀಗ್ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಯೂತ್ ಲೀಗ್ ಕಾರ್ಯಕರ್ತರಾದ ಇರ್ಷಾದ್, ಹಸನ್, ಇಸ್ಹಾಕ್ ಎಂಬವರ ವಿರುದ್ಧ ಪ್ರಕರಣ ದಾಖಲಿಸ ಲಾಗಿದೆ.
ಕೃತ್ಯಕ್ಕೆ ರಾಜಕೀಯ ದ್ವೇಷ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಕಣ್ಣೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ಚಂದ್ರ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ವೇಳೆ ಇರ್ಷಾದ್ ಎಂಬಾತನಿಗೂ ಗಾಯವಾಗಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Kshetra Samachara
24/12/2020 09:15 pm