ಉಪ್ಪಿನಂಗಡಿ: ಹಿಜಾಬ್ ವಿಚಾರವಾಗಿ ವಾರಗಳ ಹಿಂದೆ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಪ್ರವೇಶಕ್ಕೆ ನಿರ್ಬಂಧಕ್ಕೊಳಪಟ್ಟಿದ್ದ ಆರು ಮಂದಿ ವಿದ್ಯಾರ್ಥಿನಿಯರು ಇನ್ನು ಮುಂದೆ ಕಾಲೇಜಿನ ಸಮವಸ್ತ್ರ ನಿಯಮಾವಳಿಯನ್ನು ಉಲ್ಲಂಘಿಸುವುದಿಲ್ಲವೆಂದು ಬುಧವಾರ ಮುಚ್ಚಳಿಕೆ ಬರೆದುಕೊಟ್ಟಿದ್ದು, ಕಾಲೇಜಿನ ಸಮವಸ್ತ್ರ ನಿಯಮಾವಳಿಯಂತೆ ಬಂದ ಅವರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಯಿತು.
ಕಾಲೇಜು ಸಮವಸ್ತ್ರ ನಿಯಮಾವಳಿಯನ್ನು ಉಲ್ಲಂಘಿಸುವ ಮೂಲಕ ಆ ಬಳಿಕ ತರಗತಿ ಪ್ರವೇಶಕ್ಕೆ ನಿರ್ಬಂಧ ಹೇರಲ್ಪಟ್ಟ 25 ವಿದ್ಯಾರ್ಥಿನಿಯರು ಇನ್ನು ತರಗತಿ ಪ್ರವೇಶಕ್ಕೆ ಬಾಕಿ ಇದ್ದಾರೆ.
Kshetra Samachara
08/06/2022 07:28 pm