ಸುರತ್ಕಲ್: ನಗರದ ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಕೊಲೆ ಕೃತ್ಯದ ಬಳಿಕ ಆಶ್ರಯ ನೀಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ನಿವಾಸಿ ಹರ್ಷಿತ್ ಬಂಧಿತ ಆರೋಪಿ. ಫಾಝಿಲ್ ಹತ್ಯೆಯ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಅವರಿಗೆ ಉಳಿದುಕೊಳ್ಳಲು ಆಶ್ರಯ ನೀಡಿದ್ದಾನೆಂದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಆ.17ರಂದು ವಶಕ್ಕೆ ತೆಗೆದುಕೊಂಡಿದ್ದಾರೆ. ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿರುವ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ.
PublicNext
17/08/2022 09:42 pm