ಮಂಗಳೂರು: ನಿಲ್ಲಿಸಿದ್ದ ಟಿಪ್ಪರ್‌ಗೆ ರಿಕ್ಷಾವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮರೋಳಿಯಲ್ಲಿ ಇಂದು ನಡೆದಿದೆ.
ವಳಚ್ಚಿಲ್ ನಿವಾಸಿ ಸಲೀಂ (40) ಮೃತ ರಿಕ್ಷಾ ಚಾಲಕ. ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಲೀಂ ಬೆಳಗ್ಗೆ ರಿಕ್ಷಾದಲ್ಲಿ ಮಲ್ಪೆಯಿಂದ ಮೀನು ತುಂಬಿಕೊಂಡು ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ರಿಕ್ಷಾ ಮರೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ವರ್ಷಗಳಿಂದ ನಿಂತಿದ್ದ ಟಿಪ್ಪರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸಲೀಂ ಅವರನ್ನು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
Kshetra Samachara
07/10/2020 03:21 pm