ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಕನ್ಯಾನದ ಅಪ್ರಾಪ್ತ ಬಾಲಕಿ ಸಾವು ಪ್ರಕರಣ; ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಮೇ 30 ರಂದು ಪ್ರತಿಭಟನೆ

ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಸಾವಿಗೆ ಕಾರಣನಾದ ಆರೋಪಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮತ್ತು ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ ಮೇ 30ರ ಸೋಮವಾರ ವಿಟ್ಲದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದ್ದಾರೆ.

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರು ಈ ಘಟನೆ ಬಗ್ಗೆ ದಲಿತ್ ಸೇವಾ ಸಮಿತಿ ವಿರುದ್ಧ ಸುಳ್ಳು ಆರೋಪ ಮಾಡಿರುವುದು ಖಂಡನೀಯ. ದಲಿತ ಸಮುದಾಯದವರ ಮೇಲೆ ದೌರ್ಜನ್ಯ ನಡೆದಾಗ ದಲಿತ್ ಸೇವಾ ಸಮಿತಿ ಕೈಕಟ್ಟಿ ಕುಳಿತುಕೊಂಡಿಲ್ಲ. ಕನ್ಯಾನದ ಬಾಲಕಿ ಮೃತಪಟ್ಟ ತಕ್ಷಣವೇ ವಿಟ್ಲ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇವೆ. ನಮ್ಮ ಜಿಲ್ಲೆಯಲ್ಲಿ ಈ ಹಿಂದೆ ದಲಿತ್ ಸಮುದಾಯದವರ ಮೇಲೆ ಹಲವು ಅತ್ಯಾಚಾರ, ಕೊಲೆ ಪ್ರಕರಣಗಳು ನಡೆದಿದ್ದರೂ ಹಿಂದೂ ಸಂಘಟನೆಗಳು ಯಾವುದೇ ಪ್ರತಿಭಟನೆ ನಡೆಸಿಲ್ಲ. ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ನಡೆದ ದಿನೇಶ್ ಹತ್ಯೆ ಪ್ರಕರಣ, ಪುತ್ತೂರಿನ ಸೊರಕೆಯಲ್ಲಿ ಮುಗೇರ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಕೊಳ್ನಾಡು ಗ್ರಾಮದಲ್ಲಿ ಮಾನಭಂಗಕ್ಕೆ ಯತ್ನ, ಸಂಪ್ಯದಲ್ಲಿ ಅಪ್ರಾಪ್ತ ಬಾಲಕಿಗೆ ಗರ್ಭದಾನ ಪ್ರಕರಣ, ಇದೇ ರೀತಿಯ ಹಲವು ಘಟನೆಗಳು ನಡೆದಾಗ ಹಿಂದೂ ಸಂಘಟನೆಗಳು ಮೌನವಾಗಿದ್ದು, ದಲಿತ್ ಸೇವಾ ಸಮಿತಿ ಇದರ ವಿರುದ್ಧ ಹೋರಾಟ ನಡೆಸಿದೆ ಎಂದರು.

ಆರೋಪಿ ಸಾಹುಲ್ ಹಮೀದ್ ಎಂಬಾತನ ಕಿರುಕುಳದಿಂದ ಬಾಲಕಿ ಸಾವಿಗೆ ಶರಣಾಗಿದ್ದು, ಬಾಲಕಿ ಕುಟುಂಬಕ್ಕೆ ಹತ್ತು ಲಕ್ಷ ರೂ. ಪರಿಹಾರ ಸರಕಾರ ನೀಡಬೇಕು. ಆರೋಪಿಯನ್ನು ಗಲ್ಲು ಶಿಕ್ಷೆಗೊಳಪಡಿಸಬೇಕು ಮತ್ತು ರಾಜ್ಯಾದ್ಯಂತ ನಡೆದ ದಲಿತರ ಮೇಲಿನ ಅತ್ಯಾಚಾರ, ದೌರ್ಜನ್ಯ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಮೇ 30ರಂದು ಬೆಳಿಗ್ಗೆ ವಿಟ್ಲ ಜೈನ ಬಸದಿ ಬಳಿಯಿಂದ ಮೆರವಣಿಗೆ ಹೊರಟು ನಾಡಕಚೇರಿಯಲ್ಲಿ ಉಪತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಯು, ಮಹಿಳಾ ಘಟಕದ ಉಪಾಧ್ಯಕ್ಷೆ ವಿಮಲ ಮುಳಿಯ, ಸಂಚಾಲಕಿ ವಿಮಲ ಸೀಗೆಬಲ್ಲೆ, ಶ್ರೀದೇವಿ, ಗೋಪಾಲ ನೇರಳಕಟ್ಟೆ, ಗಣೇಶ್ ಸೀಗೆಬಲ್ಲೆ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

28/05/2022 01:16 pm

Cinque Terre

6.82 K

Cinque Terre

0

ಸಂಬಂಧಿತ ಸುದ್ದಿ