ಬಂಟ್ವಾಳ: ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ಯುವಕನನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರನ್ನೊಳಗೊಂಡ ವಿಟ್ಲ ಠಾಣೆಯ ಪೊಲೀಸ್ ತಂಡ ಬಂಧಿಸಿ, 80 ಸಾವಿರ ರೂ. ಮೌಲ್ಯದ ವಸ್ತು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕಿನ ಉಕ್ಕುಡ ಕಾಂತಡ್ಕದಲ್ಲಿ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಬಂಧಿತ. ಅಪರಾಧ ಪತ್ತೆ ದಳ ಹಾಗೂ ವಿಟ್ಲ ಠಾಣೆ ಸಿಬ್ಬಂದಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತನಿಂದ 300 ಗ್ರಾಂ ತೂಕದ ಗಾಂಜಾ ಎಣ್ಣೆ, 40 ಗ್ರಾಂ ಮೊಗ್ಗು ಕಾಯಿ ಮಿಶ್ರಿತ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್ ಮಾರ್ಗದರ್ಶನದಲ್ಲಿ ಬಂಟ್ವಾಳ ಸಹಾಯಕ ಅಧೀಕ್ಷಕ ವ್ಯಾಲೆಂಟಿನ್ ಡಿಸೋಜ ನಿರ್ದೇಶನದಂತೆ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರನ್ನೊಳಗೊಂಡ ವಿಟ್ಲ ಠಾಣೆ ಉಪನಿರೀಕ್ಷಕ ವಿನೋದ್ ಎಸ್. ಕೆ., ಬಂಟ್ವಾಳ ಸಂಚಾರಿ ಠಾಣೆ ಉಪನಿರೀಕ್ಷಕ ರಾಜೇಶ್ ಕೆ.ವಿ., ವಿಟ್ಲ ಪ್ರೊಬೆಷನರಿ ಉಪನಿರೀಕ್ಷಕ ಕೃಷ್ಣಕಾಂತ್, ಸಿಬ್ಬಂದಿ ಗೋಣಿಬಸಪ್ಪ, ಕುಮಾರ್, ವಿವೇಕ್, ವಿಟ್ಲ ಸಿಬ್ಬಂದಿ ಕೆ. ಟಿ. ಜಯರಾಮ, ಪ್ರಸನ್ನ, ಲೋಕೇಶ್, ಪ್ರತಾಪ, ವಿನಾಯಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ವಿಶಾಖಪಟ್ಟಣದ ಗಾಂಜಾ ಪೆಡ್ಲರ್ ಗಳ ಜತೆ ಬಂಧಿತನಿಗೆ ನಿರಂತರ ಸಂಪರ್ಕ ಇರುವ ಬಗ್ಗೆ ಮಾಹಿತಿಗಳಿದ್ದು, ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.
Kshetra Samachara
04/10/2020 08:09 pm