ಬಂಟ್ವಾಳ ಗ್ರಾಮಾಂತರ ಎಸ್ ಐ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದ ಕಿಡಿಗೇಡಿಗಳು

ಬಂಟ್ವಾಳ: ಪೊಲೀಸರು, ಗಣ್ಯ ವ್ಯಕ್ತಿಗಳ ನಕಲಿ ಫೇಸ್ ಬುಕ್ ಖಾತೆಗಳನ್ನು ಮಾಡಿಕೊಂಡು ಹಣಕ್ಕಾಗಿ ಮೆಸೇಜ್ ಮಾಡುವ ಕಿಡಿಗೇಡಿ ಕೃತ್ಯಗಳು ಕೆಲ ತಿಂಗಳಿಂದ ಜಾಸ್ತಿಯಾಗುತ್ತಿದ್ದು, ಇದೀಗ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ ಐ ಅವರಿಗೂ ಇದು ಅನುಭವಕ್ಕೆ ಬಂದಿದೆ.

ಬಂಟ್ವಾಳ ಗ್ರಾಮಾಂತರ ಠಾಣಾ ಪಿ ಎಸ್ ಐ ಪ್ರಸನ್ನ ಅವರ ಫೇಸ್ ಬುಕ್ ನ ನಕಲಿ ಖಾತೆಯನ್ನು ಕಿಡಿಗೇಡಿಗಳು ಸೃಷ್ಟಿಸಿದ ಕುರಿತು ದ.ಕ. ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಸನ್ನ ಅವರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿದಾತ, ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ, ಮೆಸೆಂಜರ್ ನಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದು, ಅನುಮಾನಗೊಂಡ ಸ್ನೇಹಿತರೊಬ್ಬರು ಈ ಕುರಿತು ಗಮನಕ್ಕೆ ತಂದಾಗ ವಿಷಯ ಬೆಳಕಿಗೆ ಬಂದಿದೆ.

ಕೂಡಲೇ ಖಾತೆಯನ್ನು ರಿಪೋರ್ಟ್ ಮಾಡಿ ಬ್ಲಾಕ್ ಮಾಡಿಸಲಾಗಿದ್ದು, ಇದರ ಜಾಡು ಪತ್ತೆ ಹಚ್ಚಲಾಗುತ್ತಿದೆ. ಇದೇ ರೀತಿ ಗಣ್ಯರು, ಪೊಲೀಸರ ನಕಲಿ ಅಕೌಂಟ್ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಡುವ ಕುರಿತು ಈಗಾಗಲೇ ಹಲವು ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿದ್ದು, ಅನುಮಾನ ಬಂದರೆ ಕೂಡಲೇ ಸಮೀಪದ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನ ತನ್ನ ಖಾತೆಯಲ್ಲಿ ಬರೆದುಕೊಂಡಿರುವ ಎಸ್.ಐ. ಅವರು, ಸ್ನೇಹಿತರೆ ನನ್ನ ಹೆಸರಿನಲ್ಲಿ ಯಾರೋ ಫೇಕ್ ಅಕೌಂಟ್ ತೆರೆದು ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ದಯವಿಟ್ಟು ಅದನ್ನ ಅಕ್ಸೆಪ್ಟ್ ಮಾಡಬೇಡಿ ಮತ್ತು ಅವರಿಂದ ಮೋಸಕ್ಕೆ ಒಳಗಾಗಬೇಡಿ.

ನಿಮಗೆ ಯಾವುದಾದರೂ ಮೆಸೇಜ್ ಕಳುಹಿಸಿದರೆ ನನ್ನ ಗಮನಕ್ಕೆ ತನ್ನಿ ಎಂದಿದ್ದಾರೆ.

Kshetra Samachara

Kshetra Samachara

11 days ago

Cinque Terre

7.19 K

Cinque Terre

0